Thursday, December 19, 2024

ಅರ್ಥಪೂರ್ಣವಾಗಿ ವಿಶ್ವಮಾನವ ದಿನಾಚರಣೆಗೆ ನಿರ್ಧಾರ

 ಅರ್ಥಪೂರ್ಣವಾಗಿ ವಿಶ್ವಮಾನವ ದಿನಾಚರಣೆಗೆ ನಿರ್ಧಾರ

ಯಾದಗಿರಿ  : ರಾಷ್ಟçಕವಿ ಕುವೆಂಪುರವರ ಜಯಂತ್ಯೋತ್ಸವ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಇದೇ ಡಿಸೆಂಬರ್ 29 ರಂದು ಜಿಲ್ಲಾಡಳಿತದವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.



     ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಶ್ವಮಾನವ ದಿನಾಚರಣೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

     ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಅವರು ಅಂದು ಬೆಳಿಗ್ಗೆ ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ವೇದಿಕೆ, ಆಹ್ವಾನ ಪತ್ರಿಕೆ ಸೇರಿದಂತೆ ಇನ್ನಿತರ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

     ಅದರಂತೆ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಕಚೇರಿಗಳಲ್ಲಿ ಈ ಜಯಂತ್ಯೋತ್ಸವ ತಪ್ಪದೇ ಆಚರಿಸಲು ತಾಲೂಕು ಮಟ್ಟದಲ್ಲಿ ಗ್ರಾಮ ಪಂಚಾಯತಗಳಲ್ಲಿ ಈ ಜಯಂತಿ ಆಚರಣೆಗೆ ಸಕಲ ಕ್ರಮಗಳನ್ನು ಕೈಗೊಳ್ಳಬೇಕು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ ಮಾಡಲು, ಹಾಗೂ ನುರಿತ ಉಪನ್ಯಾಸಕರನ್ನು ಜಿಲ್ಲಾಮಟ್ಟದಲ್ಲಿ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

     ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಬೇಕು, ಜಿಲ್ಲೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಯಾ ಸಮಾಜದ ಮುಖಂಡರು, ಸಂಘ ಸಂಸ್ಥೆಗಳವರು ತಪ್ಪದೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಸಲಹೆ ನೀಡಿದರು.
 
     ಈ ಸಭೆಯಲ್ಲಿ ಡಿವೈಎಸ್‌ಪಿ ಅರುಣಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು ಸುಲೈಮಾನ ಡಿ.ನದಾಫ್, ಪೋ.ಎನ್.ಗುರುಪ್ರಸಾದ್ ವೈದ್ಯ, ದುರ್ಗಪ್ಪ ಪೂಜಾರಿ, ದೇವಿಂದ್ರಪ್ಪ ಧೋತ್ರೆ, ಮಧುಕುಮಾರ, ನಿವೃತ್ತ ಉಪನ್ಯಾಸಕ ಸಿ.ಎಂ.ಪಟ್ಟೇದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
 

No comments:

Post a Comment