Thursday, December 19, 2024

ವಸತಿ ನಿಲಯ ಪಾಲಕರಿಗೆ ವಿವಿಧ ಕಾಯ್ದೆಗಳ ಕುರಿತು ಕಾರ್ಯಾಗಾರ; ನ್ಯಾಯಾಧೀಶರಿಂದ ಚಾಲನೆ

 ವಸತಿ ನಿಲಯ ಪಾಲಕರಿಗೆ ವಿವಿಧ ಕಾಯ್ದೆಗಳ ಕುರಿತು ಕಾರ್ಯಾಗಾರ; ನ್ಯಾಯಾಧೀಶರಿಂದ ಚಾಲನೆ

ಮಕ್ಕಳ ದೈನಂದಿನ ಚಟುವಟಿಕೆಗಳ ಮೇಲೆ ನಿಗಾ ಇಡಿ; ಹೆಚ್.ಎ.ಸಾತ್ವಿಕ್
ರಾಯಚೂರು :- ಜಿಲ್ಲೆಯ ಮುಗ್ಧ ಮನಸ್ಸಿನ ಮಕ್ಕಳ ಸಂಪೂರ್ಣ ರಕ್ಷಣೆ ನಿಲಯ ಪಾಲಕರಾಗಿದ್ದು, ಮಕ್ಕಳ ದೈನಂದಿನ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು. ಪೋಕ್ಸೋ ಸೇರಿದಂತೆ ಇತರೆ ಕಾಯ್ದೆಗಳ ಕುರಿತು ತಿಳಿವಳಿಕೆ ಮೂಡಿಸಬೇಕೆಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ಹೇಳಿದರು.      

ಅವರು ಡಿ.19ರ ಗುರುವಾರ ದಂದು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಪೋಕ್ಸೋ ಕಾಯ್ದೆ-2012, ಬಾಲನ್ಯಾಯ ಕಾಯ್ದೆ-2015ರ ಕುರಿತು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಪಾಲಕರಿಗೆ ಒಂದು ದಿನದ ಜಾಗೃತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ, ಮಾತನಾಡಿದರು.
 
ನಿಲಯ ಪಾಲಕರು ಮಕ್ಕಳ ದೈನಂದಿನ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು. ಪೋಕ್ಸೋ ಕಾಯ್ದೆಯಡಿ ನ್ಯಾಯಾಲಯದಲ್ಲಿ ಹೆಚ್ಚು ಪ್ರಕರಣಗಳು ಬರುತ್ತಿವೆ. ಪೋಕ್ಸೋ ಕಾಯ್ದೆಯು ಗಂಭೀರವಾದ ಪ್ರಕರಣವಾಗಿದೆ. ನಿರ್ಭಯ ಪ್ರಕರಣದಂತ ಪ್ರಕರಣಗಳು ಮರುಕಳಿಸಬಾರದು ಎಂಬ ಉದ್ದೇಶದಿಂದ ಪೋಕ್ಸೋ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಜೊತೆಗೆ ಬಿಎನ್‌ಎಸ್ ಕಾಯಿದೆಯು ಮಕ್ಕಳ ಬಗ್ಗೆ ಕಾಳಜಿವಹಿಸುತ್ತಿದೆ ಎಂದರು.

ಮಕ್ಕಳ ಹಕ್ಕುಗಳನ್ನು ನಿರ್ಲಕ್ಷ ಮಾಡಬಾರದು. ಮಕ್ಕಳ ರಕ್ಷಣೆಗಾಗಿ ಹಲವಾರು ಘಟಕಗಳು ಜಾರಿಗೆ ಬಂದಿವೆ. ಎಲ್ಲರೂ ಮಕ್ಕಳ ಹಕ್ಕುಗಳ ರಕ್ಷಣೆ ಮಾಡಬೇಕು. ಅದು ಎಲ್ಲರ ಆದ್ಯಕರ್ತವ್ಯವಾಗಿದೆ. ನಿಲಯಪಾಲಕರು ಕಾಯ್ದೆಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಕಾರ್ಯಾಗಾರದ ಸದುಪಯೋಗ ಪಡೆಯಬೇಕೆಂದು ಸಲಹೆ ನೀಡಿದರು.  

ಈ ವೇಳೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ ಅವರು ಮಾತನಾಡಿ, ಪೋಕ್ಸೋ ಕಾಯ್ದೆಯು ಕಠಿಣ ಹಾಗೂ ಮಕ್ಕಳ ಸ್ನೇಹಿಯಾಗಿದೆ.  ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಲು ಬರುವ ಮಕ್ಕಳು ಸಾಮಾನ್ಯವಾಗಿ ಬಡವರ ಮನೆಯ ಮಕ್ಕಳಾಗಿರುತ್ತಾರೆ. ಮನೆಯ ವಾತಾವರಣದಿಂದ ಸರ್ಕಾರಿ ಹಾಸ್ಟೆಲ್‌ಗಳಿಗೆ ಬಂದಿರುತ್ತಾರೆ. ಹೀಗಾಗಿ ಹಾಸ್ಟೆಲ್‌ಗಳಲ್ಲಿನ ವಿದ್ಯಾರ್ಥಿಗಳನ್ನು ವಾರ್ಡನ್‌ಗಳು, ಸಿಬ್ಬಂದಿ ಕೂಡ ತಮ್ಮ ಮಕ್ಕಳಂತೆಯೇ ನೋಡಿಕೊಳ್ಳಬೇಕೆಂದರು.

ರಾಜ್ಯದಲ್ಲಿ ರಾಯಚೂರು ಜಿಲ್ಲೆಯು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಗುರುತಿಸುವ ರೀತಿಯಲ್ಲಿ ಮಾಡಬೇಕು. ಮಕ್ಕಳಿಗೆ ಮಹಾತ್ಮರ ಜೀವನ ಚೆರಿತ್ರೆಯನ್ನು ತಿಳಿಸುವ ಕಾರ್ಯ ನಿಲಯ ಪಾಲಕರಿಂದ ಆಗಬೇಕು. ಅಲ್ಲದೆ ವಸತಿ ನಿಲಯಗಳಲ್ಲಿ ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟವನ್ನು ಕಾಪಾಡಬೇಕೆಂದು ಸಲಹೆ ನೀಡಿದರು.

ರಿಮ್ಸ್ ಆಸ್ಪತ್ರೆಯ ಮಕ್ಕಳ ಮಾನಸಿಕ ಆರೋಗ್ಯ ತಜ್ಞ ಡಾ.ರಮೇಶ್ ಬಾಬು ಅವರು ಮಾತನಾಡಿ, ಮೊದಲು ನಾವು ಸುಧಾರಣೆಯಾಗಬೇಕು. ನಂತರ ಸಮಾಜವನ್ನು ಸುಧಾರಣೆ ಮಾಡುವ ಮೂಲಕ ಸಮಾಜದಲ್ಲಿನ ಮೌಡ್ಯತ್ವವನ್ನು ತೆಗೆಯಬೇಕು. ಅಲ್ಲದೆ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಘಟನೆಗಳು ಆಗದಂತೆ ನೋಡಿಕೊಳ್ಳಬೇಕೆಂದರು.

ಪ್ರಾಸ್ತವಿಕವಾಗಿ ಜಿಲ್ಲಾ ಮಕ್ಕಳ ಘಟಕದ ರಕ್ಷಣಾಧಿಕಾರಿ ಅಮರೇಶ ಅವರು ಮಾತನಾಡಿ, ವಸತಿ ನಿಲಯಗಳಲ್ಲಿನ ಮಕ್ಕಳ ರಕ್ಷಣೆ ಮಾಡುವುದು ನಿಲಯ ಪಾಲಕರ ಆದ್ಯ ಕರ್ತವ್ಯವಾಗಿದ್ದು, ಎಲ್ಲ ನಿಲಯ ಪಾಲಕರು ಕಾಯಿದೆಗಳನ್ನು ಸರಿಯಾಗಿ ತಿಳಿದುಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಸಮಾಜ ನಮ್ಮನ್ನು ಸೂಕ್ಷ್ಮವಾಗಿ ಗಮನಿಸುತ್ತದೆ ಅದನ್ನು ಅರಿತುಕೊಂಡು ನಿಲಯಪಾಲಕರು ಕಾರ್ಯನಿರ್ವಹಿಸಬೇಕೆಂದು ಹೇಳಿದರು.  

ಇದೇ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಮಂಗಳಾ ಹೆಗಡೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಣಾಧಿಕಾರಿ ಶರಣಮ್ಮ, ಮಕ್ಕಳ ಸಂಯೋಜಕರಾದ ಸುದರ್ಶನ ಸೇರಿದಂತೆ ಇತರರು ಇದ್ದರು.

No comments:

Post a Comment