ವಿಜಯಪುರ, ಡಿಸೆಂಬರ್ : ಜಿಲ್ಲೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಅರ್ಹ ಎಲ್ಲ ಫಲಾನುಭವಿಗಳಿಸಿ ಲಾಭ ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ್ ಅಹ್ಮದ ಬೋರಾಮಣಿ ಬಿನ್ ಮಹಿಬೂಬಸಾಬ ಬೋರಾಮಣಿ ತಿಳಿಸಿದರು.
ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವಿಜಯಪುರ ಜಿಲ್ಲೆಯು ಎರಡನೆಯ ಸ್ಥಾನದಲ್ಲಿದೆ. ಜಿಲ್ಲೆಗೆ ಪ್ರಥಮ ಸ್ಥಾನ ದೊರಕಿಸಲು ಅಧಿಕಾರಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅವರು ಹೇಳಿದರು.
ಜಿಲ್ಲೆಯಲ್ಲಿ ಪಂಚ ಯೋಜನೆಗಳ ತಿಳುವಳಿಕೆ ಇದ್ದರು ಸಹಿತ ವಿವಿಧ ಮೂಲಗಳಿಂದ ಹೆಚ್ಚಿನ ಪ್ರಚಾರ ಮಾಡಿ ಅರ್ಹ ಎಲ್ಲಾ ಫಲಾನುಭವಿಗಳಿಗೂ ಯೋಜನೆಗಳ ಲಾಭ ಮಟ್ಟುವಂತೆ ಮಾಡಬೇಕು. ಶಕ್ತಿ ಯೋಜನೆಯಲ್ಲಿ ಫಲಾನುಭವಿಗಳ ಹಾಗೂ ವಿದ್ಯಾರ್ಥಿಗಳ ಬಸ್ಸುಗಳ ಬೇಡಿಕೆಗೆ ಅನುಗುಣವಾಗಿ ಅಧಿಕಾರಿಗಳು ಸಲ್ಲಿಸಿದ ಪ್ರಸ್ತಾವನೆ ಪ್ರಕಾರ ನಮ್ಮ ಜಿಲ್ಲೆಗೆ ಇನ್ನೂ ೨೦೦ ಹೊಸ ಬಸ್ಸುಗಳ ಮಂಜೂರಾತಿಗಾಗಿ ಸರ್ಕಾರ ಮಟ್ಟದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಮೂಲಕ ಸರ್ಕಾರದ ಗಮನ ಸೆಳೆಯುವುದಾಗಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಅನ್ನ ಭಾಗ್ಯ , ಗೃಹ ಲಕ್ಮೀ ಹಾಗೂ ಯುವ ನಿಧಿಯ ಯೋಜನೆಗಳಲ್ಲಿ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಅಧಿಕಾರಿಗಳ ಹಂತದಲ್ಲಿ ಸರಿಪಡಿಸಬೇಕು ಹಾಗೂ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲು ತಿಳಿಸಿದರು. ಜಿಲ್ಲಾ ಮಟ್ಟದ ಸಮಿತಿಯಂತೆ ತಾಲೂಕಾ ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಸದ್ದಾಂ ಕುಂಟೋಜಿ ಹಾಗೂ ಹೊನ್ನಮಲ್ಲ ಸಾರವಾಡ, ಸಮಿತಿಯ ಸದಸ್ಯರುಗಳು, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಎನ್.ಕೆ.ಗೋಠೆ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.
No comments:
Post a Comment