Thursday, December 19, 2024

ಹೋರಾಟಗಾರ ಬಾಳ್ಳುಗೋಪಾಲ್‍ಗೆ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಆಹ್ವಾನ

 ಹಾಸನ: ಮಂಡ್ಯದಲ್ಲಿ ನಡೆಯಲಿರುವ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಪರ ಹೋರಾಟಗಾರ ಬಾಳ್ಳುಗೋಪಾಲ್ ಅವರನ್ನು ಸನ್ಮಾನಿಸಲು ಆಯ್ಕೆಮಾಡಲಾಗಿದೆ. ಬಾಳ್ಳುಗೋಪಾಲ್ ಅವರು ಕಳೆದ ಮೂರು ದಶಕಗಳಿಂದಲೂ ಕನ್ನಡಪರ ಹೋರಾಟಗಳಲ್ಲಿ ಸಕ್ರಿಯರಾಗಿದ್ದಾರೆ.

ಹಾಸನ ಜಿಲ್ಲಾ ಡಾ|| ರಾಜ್ ಕುಮಾರ್ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷರಾಗಿ, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ಬಾಳ್ಳುಗೋಪಾಲ್ ಅವರಿಗೆ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ಡಿ.22 ರಂದು ಮಧ್ಯಾಹ್ನ 2 ಗಂಟೆಗೆ ಸನ್ಮಾನಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರು ಅಧಿಕೃತವಾಗಿ ಆಹ್ವಾನಿಸಿದ್ದಾರೆ.

No comments:

Post a Comment